Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೇವಿಯರು ಅರಸನ ಸುತ್ತಲೂ ನಿಂತಿರಬೇಕು. ಪ್ರತಿಯೊಬ್ಬರು ತಮ್ಮ ಖಡ್ಗವನ್ನು ಹಿಡಿದವರಾಗಿರಬೇಕು. ಯಾರಾದರೂ ಆಲಯದೊಳಕ್ಕೆ ಪ್ರವೇಶಿಸಿದರೆ ಅವನನ್ನು ಸಾಯಿಸಿರಿ. ರಾಜನು ಹೋಗುವ ಸ್ಥಳಗಳಲ್ಲಿ ನೀವು ಅವನೊಂದಿಗೆಯೇ ಇರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:7
7 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.


ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.


ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.


ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು