Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಲಸಗಳ ಮೇಲ್ವಿಚಾರಣೆ ಮಾಡುವವರು ನಂಬಿಗಸ್ತರಾಗಿದ್ದರು. ದೇವಾಲಯವನ್ನು ಸರಿಪಡಿಸುವ ಯೋಜನೆಯು ಪೂರ್ಣಗೊಂಡಿತು. ಅವರು ಅದನ್ನು ಮುಂಚೆ ಹೇಗಿತ್ತೋ ಹಾಗೆಯೇ ಮಾಡಿದರು; ಅಲ್ಲದೆ ಅದಕ್ಕಿಂತಲೂ ಹೆಚ್ಚು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:13
7 ತಿಳಿವುಗಳ ಹೋಲಿಕೆ  

‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’


ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.


ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.


ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು