Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:18
28 ತಿಳಿವುಗಳ ಹೋಲಿಕೆ  

ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.


ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.


ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.


ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.


ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.


ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.


ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.


ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು