Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:22
19 ತಿಳಿವುಗಳ ಹೋಲಿಕೆ  

ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.


ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ; ನಾನಾದರೋ ನಿನಗೆ ಮೊರೆಯಿಡುತ್ತೇನೆ.


ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.


ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು