Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವರುಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರೋಧವಾಗಿ ಹೊರಟಿತು. ಆ ಸೈನ್ಯದವರು ಯೆಹೂದದೇಶದೊಳಗೆ ನುಗ್ಗಿ ಯೆರೂಸಲೇವಿುಗೆ ಬಂದು ಇಸ್ರಾಯೇಲ್ಯರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ಬಂತು. ಅವರು ಯೆಹೂದದೇಶ ಮತ್ತು ಜೆರುಸಲೇಮಿನ ಮೇಲೆ ದಾಳಿ ಮಾಡಿ ಎಲ್ಲಾ ನಾಯಕರನ್ನು ಸಂಹರಿಸಿದರು. ಅಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳನ್ನು ದಮಸ್ಕದ ಅರಸನಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:23
9 ತಿಳಿವುಗಳ ಹೋಲಿಕೆ  

ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.


ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು