2 ಪೂರ್ವಕಾಲ ವೃತ್ತಾಂತ 24:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.