Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೂದ ಮತ್ತು ಜೆರುಸಲೇಮಿನಲ್ಲಿ ಲೇವಿಯರು ಜನರಿಗೆಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:9
5 ತಿಳಿವುಗಳ ಹೋಲಿಕೆ  

ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,


“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು