Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದಪಟ್ಟಣಗಳ ಮೇಲೆ ಬಿದ್ದು ಮೂರು ಸಾವಿರ ಜನರನ್ನು ಕೊಂದು ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿ ಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಆ ಸೈನಿಕರು ಕೋಪಗೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:13
7 ತಿಳಿವುಗಳ ಹೋಲಿಕೆ  

ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.


ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.


ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.


ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು