2 ಪೂರ್ವಕಾಲ ವೃತ್ತಾಂತ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು. ಅಧ್ಯಾಯವನ್ನು ನೋಡಿ |