Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:2
12 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.


ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.


ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಇಸ್ರಾಯೇಲರ ಮನಸ್ಸು ನುಣುಚಿಕೊಳ್ಳುತ್ತದೆ; ಈಗ ದಂಡನೆಗೆ ಈಡಾಗಿದ್ದಾರೆ. ಯೆಹೋವನೇ ಅವರ ಯಜ್ಞವೇದಿಗಳನ್ನು ಮುರಿದುಬಿಡುವನು. ಅವರ ವಿಗ್ರಹ ಸ್ತಂಭಗಳನ್ನು ಹಾಳುಮಾಡುವನು.


ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.


ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.


ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು