2 ಪೂರ್ವಕಾಲ ವೃತ್ತಾಂತ 25:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |