Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಆ ಸೇವಕರ ಮಕ್ಕಳನ್ನು ಕೊಲ್ಲಿಸಲಿಲ್ಲ. ಯಾಕೆಂದರೆ ಮೋಶೆಯ ಧರ್ಮಶಾಸ್ತ್ರದ ಪ್ರಕಾರ, ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು; ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಅವರ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:4
6 ತಿಳಿವುಗಳ ಹೋಲಿಕೆ  

ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ಪಾಪ ಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು