Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅಮಚ್ಯನು ಯೆಹೂದ್ಯರನ್ನು ಕೂಡಿಸಿ ಸಹಸ್ರಾಧಿಪತಿ ಶತಾಧಿಪತಿಗಳ ಕೈಕೆಳಗೆ ಕೊಟ್ಟು ಯೆಹೂದ ಬೆನ್ಯಾಮೀನ್ ಕುಲಗಳಲ್ಲಿನ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ ಇಪ್ಪತ್ತು ವರುಷದವರು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಮಾಡಲು ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಮಚ್ಯನು ಯೆಹೂದ ಪ್ರಾಂತ್ಯದ ಜನರನ್ನು ಒಟ್ಟುಗೂಡಿಸಿ ಅವರನ್ನು ಕುಟುಂಬಗಳಿಗನುಸಾರವಾಗಿ ವಿಭಾಗ ಮಾಡಿದನು. ಈ ಗುಂಪುಗಳಿಗೆ ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಇವರು ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಗಳಲ್ಲಿ ಇಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟವರನ್ನು ಸೈನಿಕರನ್ನಾಗಿ ಆರಿಸಿದರು. ಒಟ್ಟು ಮೂರು ಲಕ್ಷ ಸೈನಿಕರು ಬರ್ಜಿ ಗುರಾಣಿಗಳೊಂದಿಗೆ ಯುದ್ಧ ಮಾಡಲು ನುರಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:5
11 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.


ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.


ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.


ದಾವೀದನು ಸಹಸ್ರಾಧಿಪತಿ, ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಸಮಾಲೋಚನೆ ಮಾಡಿದ ನಂತರ ಇಸ್ರಾಯೇಲ್ಯರ ಸಮಸ್ತ ಸಮೂಹದವರಿಗೆ,


ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.


ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.


ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು