Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು ಇಸ್ರಯೇಲರಿಂದಲೂ ಲಕ್ಷಮಂದಿ ಯೋಧರನ್ನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು ಇಸ್ರಾಯೇಲ್ಯರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮಚ್ಯನು ಒಂದು ಲಕ್ಷ ಸೈನಿಕರನ್ನು ಇಸ್ರೇಲಿನಿಂದ ತರಿಸಿಕೊಂಡನು. ಅವರಿಗೆ ಮೂರು ಮುಕ್ಕಾಲು ಟನ್ ಬೆಳ್ಳಿಯನ್ನು ಸಂಬಳ ರೂಪದಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:6
3 ತಿಳಿವುಗಳ ಹೋಲಿಕೆ  

ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.


ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.


ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು