2 ಪೂರ್ವಕಾಲ ವೃತ್ತಾಂತ 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |