2 ಪೂರ್ವಕಾಲ ವೃತ್ತಾಂತ 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.