2 ಪೂರ್ವಕಾಲ ವೃತ್ತಾಂತ 28:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುತ್ತಾ ಇದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕೆಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು. ಅಧ್ಯಾಯವನ್ನು ನೋಡಿ |
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.