2 ಪೂರ್ವಕಾಲ ವೃತ್ತಾಂತ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೋಧರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟು ಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |
ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.