2 ಪೂರ್ವಕಾಲ ವೃತ್ತಾಂತ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಫಿಲಿಷ್ಟಿಯರು ಯೆಹೂದದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |