Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು, ಇಸ್ರಯೇಲ್ ರಾಜರ ಮಾರ್ಗದಲ್ಲಿ ನಡೆದು, ಅವರಂತೆ ಬಾಳ್‍ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅವರಂತೆ ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಇಸ್ರೇಲರ ಅರಸರಂತೆ ಕೆಟ್ಟದಾರಿಯಲ್ಲಿ ನಡೆದನು. ಅವನು ಎರಕದ ಬೊಂಬೆಗಳನ್ನು ಮಾಡಿಸಿ ಬಾಳ್ ದೇವರ ವಿಗ್ರಹಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:2
15 ತಿಳಿವುಗಳ ಹೋಲಿಕೆ  

ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಅವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ, ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.


“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು