2 ಪೂರ್ವಕಾಲ ವೃತ್ತಾಂತ 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಬೆನ್‍ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಆಹುತಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು. ಅಧ್ಯಾಯವನ್ನು ನೋಡಿ |