2 ಪೂರ್ವಕಾಲ ವೃತ್ತಾಂತ 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು. ಅಧ್ಯಾಯವನ್ನು ನೋಡಿ |