Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:8
9 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.


ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.


ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು