Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆ ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಿಜ್ಕೀಯನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿದ್ದುಕೊಂಡು ಇಪ್ಪತ್ತೊಂಭತ್ತು ವರ್ಷ ರಾಜ್ಯಭಾರ ಮಾಡಿದನು. ಅವನ ತಾಯಿ ಜೆಕರ್ಯನ ಮಗಳಾದ ಅಬೀಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:1
9 ತಿಳಿವುಗಳ ಹೋಲಿಕೆ  

ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಯೋತಾಮನ ಮಗ ಆಹಾಜ; ಆಹಾಜನ ಮಗ ಹಿಜ್ಕೀಯನು. ಹಿಜ್ಕೀಯನ ಮಗ ಮನಸ್ಸೆಯು.


ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.


ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ತನ್ನ ವಾಕ್ಯವನ್ನು ದಯಪಾಲಿಸಿದನು.


ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು