Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನಾದ ಆಹಾಜನು ತನ್ನ ಆಳಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟ ಪಾತ್ರೆಗಳನ್ನು ತಿರಿಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:19
5 ತಿಳಿವುಗಳ ಹೋಲಿಕೆ  

ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.


ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು