Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಬಲಿಪೀಠಕ್ಕೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಬಲಿಪೀಠಕ್ಕೆ ಪ್ರೋಕ್ಷಿಸಿದರು. ಆಮೇಲೆ ಕುರಿದನಗಳನ್ನು ವಧಿಸಿ ಅವುಗಳ ರಕ್ತವನ್ನೂ ಬಲಿಪೀಠಕ್ಕೆ ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಎರಚಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿದರು. ಆಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಎರಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:22
9 ತಿಳಿವುಗಳ ಹೋಲಿಕೆ  

ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.


ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು