2 ಪೂರ್ವಕಾಲ ವೃತ್ತಾಂತ 29:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲ್ಯರ ದೋಷಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.