Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:27
9 ತಿಳಿವುಗಳ ಹೋಲಿಕೆ  

ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.


ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.


ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.


ಹೇಮಾನ್ ಮತ್ತು ಯೆದುತೂನರ ಹತ್ತಿರ ವಾದ್ಯಗಾರರಿಗಾಗಿ ತುತ್ತೂರಿ, ತಾಳ ಮೊದಲಾದ ವಾದ್ಯಗಳೂ ಮತ್ತು ದೇವಕೀರ್ತನಾ ಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿ ನೇಮಿಸಲ್ಪಟ್ಟರು.


ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.


ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.


ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು