Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:31
10 ತಿಳಿವುಗಳ ಹೋಲಿಕೆ  

ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.


ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.


ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


“‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು