2 ಪೂರ್ವಕಾಲ ವೃತ್ತಾಂತ 29:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆಗಾಗಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು. ಅಧ್ಯಾಯವನ್ನು ನೋಡಿ |
ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು.
ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.