Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಯೆರೂಸಲೇಮ್ ಪಟ್ಟಣದೊಳಗೆ ತನ್ನ ತಂದೆಯಾದ ದಾವೀದನಿಗೆ ದೇವದರ್ಶನವುಂಟಾದ ಮೋರೀಯಾ ಗುಡ್ಡದಲ್ಲಿ ಯೆಹೋವನ ಆಲಯವನ್ನು ಕಟ್ಟಿಸ ತೊಡಗಿದನು. ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:1
10 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವುದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು” ಎಂದು ಆಜ್ಞಾಪಿಸಿದನು.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.


ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.


ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.


ಯೋಹಾನಾನನು ಅಜರ್ಯನನ್ನು ಪಡೆದನು. ಸೊಲೊಮೋನನು ಕಟ್ಟಿಸಿದ ಯೆರೂಸಲೇಮಿನ ದೇವಾಲಯದಲ್ಲಿ ಯಾಜಕ ಸೇವೆ ಮಾಡುತ್ತಿದ್ದವನು ಇವನೇ.


ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು