Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗರ್ಭಗುಡಿಯ ಸರಪಣಿಯಂಥ ಸರಪಣಿಗಳನ್ನು ಮಾಡಿಸಿ, ಆ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ, ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಗರ್ಭಗೃಹದ ಸರಪಣಿಯಂತೆ ಸರಪಣಿಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬಹಣ್ಣುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:16
6 ತಿಳಿವುಗಳ ಹೋಲಿಕೆ  

ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.


ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.


ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.


ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.


ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,


ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು