Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಿಗೆಗಳಿಂದಲೂ ಆ ಹಲಿಗೆಗಳನ್ನು ತೋರಣ ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕಬಂಗಾರದ ತಗಡಿನಿಂದಲೂ ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:5
6 ತಿಳಿವುಗಳ ಹೋಲಿಕೆ  

ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.


ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.


ಗೋಡೆ ಕೋಣೆಗಳಲ್ಲಿಯೂ ಒಳ ಎರಡು ಕಡೆಯ ನಿಲುವು ಕಂಬಗಳಲ್ಲಿಯೂ, ಕೈಸಾಲೆಗಳಲ್ಲಿಯೂ ಸಹ ಒಳಗಡೆ ಸುತ್ತಲೂ ಇಕ್ಕಟಾದ ಕಿಟಕಿಗಳಿದ್ದವು. ಒಂದೊಂದು ಗೋಡೆಯ ಮೇಲೆ ಖರ್ಜೂರ ಮರಗಳ ಚಿತ್ರಗಳಿದ್ದವು.


ಗೋಡೆಯ ಚೌಕಗಳಲ್ಲಿ ಕೆರೂಬಿಗಳೂ ಮತ್ತು ಖರ್ಜೂರ ಮರಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ಮರ; ಒಂದೊಂದು ಕೆರೂಬಿಗೆ ಎರಡೆರಡು ಮುಖಗಳಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು