Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅವನು ಮಹಾಪರಿಶುದ್ಧಸ್ಥಳವನ್ನು ಮಾಡಿಸಿದನು. ಅದರ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳ. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:8
7 ತಿಳಿವುಗಳ ಹೋಲಿಕೆ  

ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.


ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.


ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.


ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು