2 ಪೂರ್ವಕಾಲ ವೃತ್ತಾಂತ 30:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಅಧ್ಯಾಯವನ್ನು ನೋಡಿ |
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.