2 ಪೂರ್ವಕಾಲ ವೃತ್ತಾಂತ 30:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು. ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.