2 ಪೂರ್ವಕಾಲ ವೃತ್ತಾಂತ 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಅಧ್ಯಾಯವನ್ನು ನೋಡಿ |