2 ಪೂರ್ವಕಾಲ ವೃತ್ತಾಂತ 30:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು. ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.