Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದಾವೀದನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇವಿುನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದದರಿಂದ ಯೆರೂಸಲೇವಿುನಲ್ಲಿ ಬಹುಸಂತೋಷವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:26
5 ತಿಳಿವುಗಳ ಹೋಲಿಕೆ  

ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.


ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು