2 ಪೂರ್ವಕಾಲ ವೃತ್ತಾಂತ 31:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನರು ಕಾಣಿಕೆಗಳನ್ನೂ ತಮ್ಮ ಆದಾಯದ ದಶಮಾಂಶವನ್ನೂ ದೇವರಿಗೋಸ್ಕರ ಪ್ರತ್ಯೇಕಿಸಿದ ಮುಡುಪನ್ನೂ ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನು; ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.