Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ ಮತ್ತು ಶೆಕನ್ಯ ಇವರು ಕೋರೆಯ ಸಹಾಯಕರು. ಇವರು ಯಾಜಕರು ವಾಸಿಸುವ ಪಟ್ಟಣಗಳಲ್ಲಿದ್ದು ನಂಬಿಗಸ್ತಿಕೆಯಿಂದ ಸೇವೆ ಮಾಡಿದರು. ಕೂಡಿಸಿದ ಕಾಣಿಕೆಗಳನ್ನು ನಂಬಿಗಸ್ತಿಕೆಯಿಂದ ಯಾಜಕರ ಕುಟುಂಬದವರಿಗೆ ಪಕ್ಷಪಾತವಿಲ್ಲದೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:15
8 ತಿಳಿವುಗಳ ಹೋಲಿಕೆ  

ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.


ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,


ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.


ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು