Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರವಾಗಿಯೂ ಆಯಾ ಉದ್ಯೋಗವರ್ಗಗಳಿಗನುಸಾರವಾಗಿಯೂ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಯಾಜಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:17
14 ತಿಳಿವುಗಳ ಹೋಲಿಕೆ  

ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.


ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.


“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.


ಮೋಶೆ ಮತ್ತು ಆರೋನರೂ ಇಸ್ರಾಯೇಲರ ಪ್ರಧಾನರೂ ಲೇವಿಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.


ಮೆರಾರೀಯರಲ್ಲಿ ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.


ಗೇರ್ಷೋನ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.


ಗೋತ್ರಸ್ಥಾಪಕರಾದ ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ಎಂಬುವವರು. ಗೋತ್ರಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.


“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.


ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು