Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ತನ್ನ ದೇವರ ಒಲುಮೆಯನ್ನು ಪಡಕೊಳ್ಳುವದಕ್ಕೋಸ್ಕರ ದೇವಾಲಯದ ಸೇವಾಸಂಬಂಧದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಕೊನೆಗಾಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:21
20 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.


ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.


ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.


ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.


ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು