Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲ್ಯರು ಧಾನ್ಯ ದ್ರಾಕ್ಷಾರಸ ಎಣ್ಣೆ ಜೇನು ಮುಂತಾದ ಎಲ್ಲಾ ಹುಟ್ಟುವಳಿಯಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:5
22 ತಿಳಿವುಗಳ ಹೋಲಿಕೆ  

ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.


ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು