Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:8
20 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.


ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.


ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,


ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ


ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,


ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು