Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವದಕ್ಕೆ ಸಮರ್ಥನಾಗಿದ್ದನು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವದಕ್ಕೆ ಶಕ್ತನಾಗಿರುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಪೂರ್ವಿಕರು ಆ ದೇಶಗಳನ್ನು ನಾಶಮಾಡಿದರು. ಯಾವ ದೇವರೂ ತನ್ನ ಜನರನ್ನು ನಾನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಿಲ್ಲ. ನಿಮ್ಮ ದೇವರು ನನ್ನಿಂದ ನಿಮ್ಮನ್ನು ಕಾಪಾಡುವನು ಎಂದು ನೀವು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:14
8 ತಿಳಿವುಗಳ ಹೋಲಿಕೆ  

ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು