2 ಪೂರ್ವಕಾಲ ವೃತ್ತಾಂತ 32:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದ್ದಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಶ್ಶೂರದ ಅರಸನ ಸೇವಕರು ದೇವರಾದ ಯೆಹೋವನ ವಿರುದ್ಧವಾಗಿಯೂ ದೇವರ ಸೇವಕನಾದ ಹಿಜ್ಕೀಯನ ವಿರುದ್ಧವಾಗಿಯೂ ಕೀಳಾಗಿ ಮಾತಾಡಿದರು; ಇಸ್ರೇಲಿನ ದೇವರಾದ ಯೆಹೋವನನ್ನು ಹಾಸ್ಯ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು. ಅಧ್ಯಾಯವನ್ನು ನೋಡಿ |