2 ಪೂರ್ವಕಾಲ ವೃತ್ತಾಂತ 32:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಷ್ಟುಮಾತ್ರವಲ್ಲ, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ನಿಂದಿಸಿ ದೂಷಿಸುವುದಕ್ಕಾಗಿ ‘ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು’ ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವದಕ್ಕಾಗಿ - ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು ಎಂಬದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಶ್ಶೂರದ ಅರಸನು ಇಸ್ರೇಲಿನ ದೇವರಾದ ಯೆಹೋವನನ್ನು ಅವಮಾನ ಮಾಡಿ ಬರೆದ ಪತ್ರ ಹೀಗಿತ್ತು: “ಇತರ ದೇಶಗಳ ದೇವರುಗಳು ತಮ್ಮ ಜನರನ್ನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಾಗಲಿಲ್ಲ. ಅದೇ ರೀತಿಯಲ್ಲಿ ಹಿಜ್ಕೀಯನ ದೇವರು ತನ್ನ ಜನರನ್ನು ನಾಶಮಾಡದ ಹಾಗೆ ನನ್ನನ್ನು ತಡೆಯಲು ಸಾಧ್ಯವಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿ |