2 ಪೂರ್ವಕಾಲ ವೃತ್ತಾಂತ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.