Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಆತನು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:24
5 ತಿಳಿವುಗಳ ಹೋಲಿಕೆ  

ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು